"ಜಿಲ್ಲಾಧಿಕಾರಿಗಳ ನಡೆ - ಹಳ್ಳಿಯ ಕಡೆ " ಎಂಬ ಕಾರ್ಯಕ್ರಮಕ್ಕೆ ಶಾಸಕ ಕೆ.ಎಂ.ಶಿವಲಿಂಗೇಗೌಡರಿಂದ ಚಾಲನೆ
ಸರ್ಕಾರದ ಪ್ರತಿಯೊಂದು ಸವಲತ್ತುಗಳು ನೇರ ಅರ್ಹ ಫಲಾನುಭವಿಗಳಿಗೆ ತಲುಪುವ ಮತ್ತು ಸ್ಥಳಿಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ನೀಡುವ ಪ್ರಯತ್ನದ ಸರ್ಕಾರದ ಯೋಜನೆಯಾದ "ಜಿಲ್ಲಾಧಿಕಾರಿಗಳ ನಡೆ - ಹಳ್ಳಿಯ ಕಡೆ " ಎಂಬ ಕಾರ್ಯಕ್ರಮವನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಇಂದು ಗಂಡಸಿ ಹೋಬಳಿ ಮುದುಡಿ ಗ್ರಾಮ ಪಂಚಾಯತಿ ಕೇಂದ್ರ ಸ್ಥಾನದಲ್ಲಿ ಉದ್ಘಾಟನೆ ಮಾಡಿದರು. ಕಾರ್ಯಕ್ರಮ ಉಧ್ಘಾಟಿಸಿ ಮಾತನಾಡಿ ಸ್ಥಳಿಯವಾಗಿ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ಷೇತ್ರದ ಶಾಸಕನಾದ ನಾನು ಹಗಲಿರುಳು ಶ್ರಮಿಸುತ್ತಿದ್ದು ಅದರ ಫಲಾವಾಗಿ ಮೂಲಭೂತ ಸೌಕರ್ಯಗಳಾದ ಕುಡಿಯುವ ನೀರಿನ ಯೋಜನೆ, ಗ್ರಾಮದಲ್ಲಿ ಮತ್ತು ಸಂಪರ್ಕ ಹಳ್ಳಿಗಳಿಗೆ ರಸ್ತೆ ನಿರ್ಮಾಣ , ಸಮಯದಾಯ ಭವನ ನಿರ್ಮಾಣ ಮಾಡಿದ್ದು, ಮುಂದಿನ ದಿನಗಳಲ್ಲಿ ಕೆರೆಗಳಿಗೆ ನೀರು ತುಂಬಿಸಲು ಹೋರಾಟ ನಡೆಸಲಾಗುತ್ತದೆ ಎಂದರು. ಪ್ರಾಸ್ತಾವಿಕ ವಾಗಿ ಮಾತನಾಡಿದ ತಹಶಿಲ್ದಾರ್ ವಿಭಾ ವಿದ್ಯಾ ರಾಥೋಡ್ ರವರು ಇದೊಂದು ಸರ್ಕಾರದ ಯೋಜನೆಯಾಗಿದ್ದು, ಪ್ರತಿ ತಿಂಗಳ ಮೂರನೇ ಶನಿವಾರ ಪ್ರತಿ ಹೋಬಳಿಯ ಗ್ರಾ.ಪಂ ವಾರು ನಡೆಸಲಾಗುವುದು. ಸಾರ್ವಜನಿಕರು ಏನಾದರೂ ಇಲಾಖೆಗಳಿಗೆ ಸಂಬಂದಿಸಿದಂತೆ ಅವಹಾಲುಗಳನ್ನು ಇಲ್ಲಿ ಸಲ್ಲಿಸಬಹುದು. ಸಾಧ್ಯವಾದಷ್ಟು ಇಲ್ಲೇ ಪರಿಹಾರ ಮಾಡಲಾಗುವುದು, ಇಲ್ಲದಿದ್ದರೆ ನಿಯಮಿತ ಕಾಲಮಿತಿಯೊಳಗೆ ಪರಿಹರಿಸಲಾಗುವುದು. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ಮನವಿ ಮಾಡಿದರು. ಸಾಮಾಜಿಕ...