ನೊಳಂಬ ಲಿಂಗಾಯತ ಸಂಘ (ರಿ) ಬೆಂಗಳೂರು ಉಪಸಮಿತಿ ಅರಸೀಕೆರೆವತಿಯಿಂದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ



 ಇಂದು ಅರಸೀಕೆರೆ ನಗರದ ಸಿದ್ದರಾಮೇಶ್ವರ ಸಮುದಾಯ ಭವನದಲ್ಲಿ ನೊಳಂಬ ಲಿಂಗಾಯತ ಸಂಘ (ರಿ) ಬೆಂಗಳೂರು ಉಪಸಮಿತಿ ಅರಸೀಕೆರೆ ಇವರ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭದಲ್ಲಿ ಅರಸೀಕೆರೆ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ ಎಂ ಶಿವಲಿಂಗೇಗೌಡರು ಬಿಜೆಪಿಯ ಮುಖಂಡರಾದ ಎನ್ ಆರ್ ಸಂತೋಷ್ ಬಾಗವಹಿಸಿದ್ದರು. ಈ ಸಂದರ್ಭದಲ್ಲಿ  ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಸನ್ಮಾನವನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಶ್ರೀ ಗುರು ಸಿದ್ದರಾಮೇಶ್ವರ ಯಳನಾಡು ಮೂರು ಕಳಸ ಸಂಸ್ಥಾನದ ಶ್ರೀಗಳು,ಅರಸೀಕೆರೆ ನಗರ ಪ್ರಾಧಿಕಾರದ ಅಧ್ಯಕ್ಷರು ವಿವಿಧ ಮುಖಂಡರು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Comments